ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಖಾಸಗಿ ಸಂಸ್ಥೆಗಳು ಕಾರ್ಯಕ್ರಮ ನಡೆಸುವ ಹಾಗಿಲ್ಲ. ಈ ನಿಯಮ ಕೇವಲ RSS ಗೆ ಮಾತ್ರ ಅನ್ವಯವಲ್ಲ, ಎಲ್ಲಾ ಖಾಸಗಿ ಸಂಸ್ಥೆಗಳಿಗೂ ಅನ್ವಯ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದ್ದಾರೆ.
ಸಂಪುಟದ ನಿರ್ಣಯದ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಸಾಮಾಜಿಕ ಜಾಲತಾಣಗಳ ಮೂಲಕವೂ ಸ್ಪಷ್ಟನೆ ನೀಡಿ ಪೋಸ್ಟ್ ಮಾಡಿದ್ದಾರೆ.
ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ -ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
























