116 ಕೆಜಿ ಗಾಂಜಾ ವಶ : ಆರೋಪಿ ಸೆರೆ

ಮಂಗಳೂರೂ: ಕರ್ನಾಟಕ-ಕೇರಳ ಗಡಿಭಾಗವಾದ ಮಂಜೇಶ್ವರದ ವರ್ಕಾಡಿ ಸುಳ್ಯಮೆಯಿಂದ ಸುಮಾರು 116 ಕಿಲೋ ಗಾಂಜಾ ವಶ ಪಡಿಸಿಕೊಂಡಿರುವ ಮಂಜೇಶ್ವರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮೈಸೂರು ಜಯಪುರ ಹೋಬಳಿಯ ಸಿದ್ದೇಗೌಡ (25) ಬಂಧಿತ ಆರೋಪಿ. ಸುಳ್ಯಮೆಯ ಮನೆಯ ಶೆಡ್‌ನಲ್ಲಿ ಬಚ್ಚಿಟ್ಟಿದ್ದ ಗಾಂಜಾವನ್ನು ಅಕ್ಟೋಬರ್ 8ರಂದು ರಾತ್ರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗಾಂಜಾ ಸಾಗಾಟಕ್ಕೆ ಬಳಸುತ್ತಿದ್ದ ಮಿನಿ ಟೆಂಪೋ ವಶಕ್ಕೆ ತೆಗೆದುಕೊಂಡಿದ್ದ ಪೊಲೀಸರಿಗೆ ವಾಹನ ಚಾಲಕ ಸಿದ್ದೇಗೌಡನ ಮಾಹಿತಿ ಲಭಿಸಿತ್ತು. ತನಿಖೆಯನ್ನು ಮೈಸೂರಿಗೆ ವಿಸ್ತರಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

error: Content is protected !!
Scroll to Top