ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಇಂದು ನಡೆಯಬೇಕಿದ್ದ ಪಥಸಂಚಲನ
ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುತ್ತಿರುವ ಚಿತ್ತಾಪುರದಲ್ಲಿ ಇಂದು ನಡೆಯಬೇಕಿದ್ದ ಆರ್‌ಎಸ್‌ಎಸ್ ಪಥ ಸಂಚನಲನಕ್ಕೆ ಸರ್ಕಾರ ಅನುಮತಿ ನೀಡಲು ನಿರಾಕರಿಸಿದೆ. ಪಥಸಂಚಲನಕ್ಕೆ ಅನುಮತಿ ನೀಡಿದರೆ ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಎಂಬ ಕಾರಣ ನೀಡಿ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ತಹಸೀಲ್ದಾರ್ ನಾಗಯ್ಯ ಅನುಮತಿ ನೀಡಲು ನಿರಾಕರಿಸಿದ್ದಾರೆ.
ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವಬೆದರಿಕೆ ಹಾಕಿದ್ದನ್ನು ಖಂಡಿಸಿ ತವರು ಕ್ಷೇತ್ರದಲ್ಲಿ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗಿದೆ. ಆರ್‌ಎಸ್‌ಎಸ್ ಪಥಸಂಚಲನದ ವಿರುದ್ಧವಾಗಿ ಭೀಮ್ ಆರ್ಮಿ ಸಂಘಟನೆ ಹಾಗೂ ಭಾರತೀಯ ದಲಿತ ಪ್ಯಾಂಥರ್(ರಿ) ಸಂಘದ ಸದಸ್ಯರು ಅದೇ ಮಾರ್ಗವಾಗಿ ಪಥಸಂಚಲನ ಮಾಡಲು ಅನುಮತಿ ಕೋರಿದ್ದಾರೆ.
ಭಾನುವಾರ ಎಲ್ಲಾ ಸಂಘಟನೆಗಳು ಒಂದೇ ಮಾರ್ಗದಲ್ಲಿ ಪಥಸಂಚಲನ ನಡೆಸಿದರೆ ಗೊಂದಲ ಉಂಟಾಗಿ ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ ಸಂಘಟನೆಗಳಿಗೆ ಪಥಸಂಚಲನ ಮಾಡಲು ಅನುಮತಿ ನೀಡುವುದಿಲ್ಲ ಎಂದು ತಾಲೂಕಾಡಳಿತ ಹೇಳಿದೆ.
























