26,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯಾದ್ಯಂತ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಚಿಂತನೆ ನಡೆಸಿದೆ.

ಈ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ನೇಮಕಾತಿ ಸಂಬಂಧ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಅ. 23 ರಿಂದ ನ. 9 ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ. ಡಿ. 7 ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಶೀಘ್ರವೇ ಅನುದಾನಿತ ಶಾಲಾ ಶಿಕ್ಷಕರ ನೇಮಕಾತಿಯನ್ನೂ ಸರ್ಕಾರ ಹೊರಡಿಸಲಿದೆ. ಹೊಸದಾಗಿ ರಾಜ್ಯದಲ್ಲಿ 800 ಕೆಪಿಎಸ್ ‌ಶಾಲೆಗಳನ್ನೂ ಆರಂಭ ಮಾಡಲಾಗುತ್ತದೆ. ಆರನೇ ತರಗತಿಯಿಂದ ಕನ್ನಡದ ಜೊತೆಗೆ ಇಂಗ್ಲೀಷ್ ಕಲಿಕೆಗೂ ಪ್ರಾಶಸ್ತ್ಯ ನೀಡಲಾಗುವುದು. AI ಆಧಾರಿತ ಶಿಕ್ಷಣ ವ್ಯವಸ್ಥೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.





















































 
 
error: Content is protected !!
Scroll to Top