ಮಾವೋವಾದ ಇತಿಹಾಸದ ಪುಟ ಸೇರಲಿದೆ: ರಾಜನಾಥ್ ಸಿಂಗ್

ನವದೆಹಲಿ: ಪೊಲೀಸರು ಮತ್ತು ಭದ್ರತಾ ಪಡೆಗಳ ಅವಿರತ ಕಾರ್ಯಾಚರಣೆಯ ಫಲವಾಗಿ ಭಾರತದಲ್ಲಿ ಮಾವೋವಾದ ಶೀಘ್ರದಲ್ಲೇ ಇತಿಹಾಸದ ಪುಟಗಳನ್ನು ಸೇರಲಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ನಡೆದ ಪೊಲೀಸ್ ಹುತಾತ್ಮ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಒಂದು ಸಮಯದಲ್ಲಿ ಸರ್ಕಾರದ ವಿರುದ್ಧ ಶಸ್ತ್ರ ಹಿಡಿದ ನಕ್ಸಲರು ಈಗ ಶರಣಾಗತರಾಗುತ್ತಿದ್ದು, ಸಮಾಜದ ಮುಖ್ಯ ವಾಹಿನಿಗೆ ಬರುತ್ತಿದ್ದಾರೆ. ಇದು ದೇಶ ನಕ್ಸಲಿಸಂ ಮುಕ್ತವಾಗುತ್ತಿರುವುದರಲ್ಲಿ ಯಶಸ್ಸು ಕಾಣುತ್ತಿದೆ ಎಂಬುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2026 ಮಾರ್ಚ್ ವೇಳೆಗೆ ನಕ್ಸಲಿಸಂ ಮುಕ್ತ ಭಾರತದ ನಿರ್ಮಾಣ ಮಾಡುವುದಾಗಿ ತಿಳಿಸಿದೆ. ದೇಶದ ಆಂತರಿಕ ಭದ್ರತೆಗೆ ನಕ್ಸಲಿಸಂ ದೀರ್ಘಕಾಲದ ಸಮಸ್ಯೆಯಾಗಿದೆ. ಜನರು ಭಯದಲ್ಲಿ ‌ವಾಸಿಸುವ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಪ್ರಯತ್ನ ನಮ್ಮದು. ಈ ನಿಟ್ಟಿನಲ್ಲಿ ಪೊಲೀಸರು, ಭದ್ರತಾ ಪಡೆಗಳ ಕೆಲಸ ಶ್ಲಾಘನೀಯ. ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಿತ ಪ್ರದೇಶವಾಗಿದ್ದವುಗಳು ಈಗ ಶೈಕ್ಷಣಿಕ ಕೇಂದ್ರಗಳಾಗಿ ಬದಲಾಗುತ್ತಿವೆ ಎಂದು ಅವರು ತಿಳಿಸಿದ್ದಾರೆ.





















































 
 
error: Content is protected !!
Scroll to Top