ಬೆಂಗಳೂರು : ದೀಪಾವಳಿ ಹಿನ್ನೆಲೆ ನಾಳೆ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ಬಲಿಪಾಡ್ಯಮಿ ಹಿನ್ನೆಲೆ ಗೋಪೂಜೆ ನಡೆಸುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರು, ಕರ್ನಾಟಕ ಸರ್ಕಾರದ ಪರ ಬಲಿಪಾಡ್ಯಮಿಯಂದು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಗೋ ಪೂಜೆ ನಡೆಸುವಂತೆ ಆದೇಶಿಸಿರುವುದಾಗಿದೆ.
ಹಿಂದೂ ಧರ್ಮದಲ್ಲಿ ಗೋವಿಗೆ ವಿಶೇಷ ಸ್ಥಾನಮಾನ ಇದ್ದು, ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದೆ. ಗೋವುಗಳ ಮಹತ್ವ ಮತ್ತು ಅವುಗಳ ಸಂರಕ್ಷಣೆ ಬಗ್ಗೆ ಜನರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ಗೋಪೂಜೆ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿಮಾಡಲಾಗಿದೆ.
























