ಯಕ್ಷ ಕಲಾವಿದ ಸುಜನಾ ಸುಳ್ಯ ನಿಧನ

ಸುಳ್ಯ: ರಂಗಮನೆ’ ಎಂಬ ಕಲಾ ಕೇಂದ್ರದ ರೂವಾರಿ ಮತ್ತು ನಿರ್ದೇಶಕ ಜೀವನ್‌ರಾಮ್‌ ಸುಳ್ಯ ಅವರ ತಂದೆ, ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಸುಳ್ಯ ರಂಗ ಮನೆಯ ಸುಜನಾ ಸುಳ್ಯ ಅವರು ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಸುಳ್ಯದ ಜಯರಾಮ ನಾವೂರು ಅವರು ಸುಜನಾ ಸುಳ್ಯ ಎಂದೇ ಪ್ರಸಿದ್ಧರಾಗಿದ್ದವರು. ವಯೋಸಹಜ ಅನಾರೋಗ್ಯದ ಹಿನ್ನೆಲೆ ಅವರು ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯಗಾರರಾಗಿದ್ದ ಅವರು, ಯಕ್ಷಗಾನ ಮತ್ತು ರಂಗಭೂಮಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದರು.ಶ್ರೀಯುತರ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.





















































 
 
error: Content is protected !!
Scroll to Top