ಕಲಬುರಗಿ : ಚುನಾವಣೆ ಘೋಷಣೆಯಾಗುವುದಕ್ಕೂ ಮೊದಲೇ ಹಣ ಮತ್ತು ಉಡುಗೊರೆ ಹಂಚುವ ಭರಾಟೆ ಶುರುವಾಗಿದೆ. ಕಲಬುರಗಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 1.90 ಕೋಟಿ ರೂ.ಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್‌ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಸಾಗಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.
ಇದರಲ್ಲಿ ಕಮಲಾಪುರ ತಾಲ್ಲೂಕಿನ ಕಿಣ್ಣಿಸಡಕ್ ಚೆಕ್‌ಪೋಸ್ಟ್ ಬಳಿ 1.40 ಕೋಟಿ ರೂ ಹಾಗೂ ಜೇವರ್ಗಿ ಚೆಕ್‌ಪೋಸ್ಟ್‌ನಲ್ಲಿ 50 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.