ಸುಬ್ರಹ್ಮಣ್ಯ: ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾ ಪ್ರಾಸಾದ್ ಕೆ. ವಿ. ಮತ್ತು ಮನೆಯವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಸೇವಾ ರೂಪದಲ್ಲಿ ನೀಡುವ ಬೆಳ್ಳಿ ರಥ ಸಮರ್ಪಣಾ ಆಮಂತ್ರಣ ಪತ್ರಿಕೆ ಬಿಡುಗಡೆ ಕೆ.ವಿ.ಜಿ. ಸಮುದಾಯ ಭವನ ಅಮರಶ್ರೀಭಾಗ್‌ನಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ರೇಣುಕಾ ಪ್ರಸಾದ್, ಕಾರ್ಯಕ್ರಮದ ರೂಪುರೇಶೆಯ ಬಗ್ಗೆ ತಿಳಿಸಿದರು. ಹಾಗೆಯೇ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರೀತಿಪೂರ್ವಕವಾಗಿ ಆಮಂತ್ರಿಸಿದರು.
ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಕಮಿಟಿ ಬಿ ಇದರ ಪ್ರಧಾನ ಕಾರ್ಯದರ್ಶಿ ಡಾ.ಜ್ಯೋತಿ ಆರ್ ಪ್ರಸಾದ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್ ಮನ್ಮಥ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಪ್ರಸ್ತುತ ವ್ಯವಸ್ಥಾಪನಾ ಸಮಿತಿಯ ಸದಸ್ಯ ಅಶೋಕ್ ನೆಕ್ರಾಜೆ, ಲೀಲಾ ಮನಮೋಹನ್, ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪಕಾಧ್ಯಕ್ಷ ಪಿ.ಸಿ.ಜಯರಾಮ್ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಸುಳ್ಯ, ಪುತ್ತೂರು, ಕಡಬ, ವಿಟ್ಲ ಭಾಗದ ಸಮಾಜದ ಪ್ರಮುಖರು ಕೆ.ವಿ.ಜಿ.ಶಿ ಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳು ಮತ್ತು ಸಿಬ್ಬಂಧಿಗಳು ಉಪಸ್ಥಿತರಿದ್ದರು.
ಎ.ಓ.ಎಲ್.ಇ.ಕಮಿಟಿ ‘ಬಿ’ ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ ಸ್ವಾಗತಿಸಿ, ಕೆ.ವಿ.ಜಿ.ಐ.ಟಿ.ಐ ಪ್ರಾಂಶುಪಾಲ ದಿನೇಶ್ ಮಡ್ತಿಲ ರಥ ಮೆರವಣಿಗೆಯ ಮಾಹಿತಿ ನೀಡಿದರು. ಕೆ.ವಿ.ಜಿ.ಎ.ಜೆ.ಪಿ.ಯು.ಸಿ ಪ್ರಾಂಶುಪಾಲೆ ಡಾ.ಯಶೋಧ ರಾಮಚಂದ್ರ ವಂದಿಸಿ ಕೆ.ವಿ.ಜಿ ಡೆಂಟಲ್ ಕಾಲೇಜು ಆಡಳಿತಾಧಿಕಾರಿ ಮಾಧವ ಬಿ.ಟಿ. ಮತ್ತು ಕೆ.ವಿ.ಜಿ. ಪಾಲಿಟೆಕ್ನಿಕ್ ಉದ್ಯೋಗಿ ವಸಂತ ಕಿರಿಭಾಗ ಸಹಕರಿಸಿದರು.
























