ಚೂರಿ ಇರಿತ ಪ್ರಕರಣ : ಪ್ರಮುಖ ಆರೋಪಿ ಸೆರೆ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ಎದುರು ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿ ಎಂಬಾತನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬ ಆರೋಪಿ ಅಶೋಕ್ ಎಂಬಾತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಾರ್‌ನೊಳಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯು ತೀವ್ರಗೊಂಡು ಹೊರಗೆ ಚಾಕು ಇರಿತದಲ್ಲಿ ಅಂತ್ಯಗೊಂಡಿತ್ತು. ಈ ಘಟನೆಯಲ್ಲಿ ಗಾಯಗೊಂಡಿರುವ ನಿಝಾಮ್ ಮತ್ತು ಹಸನ್ ಮುಕ್ಷಿತ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಕ್ಟೋಬರ್ 24ರಂದು ಪೊಲೀಸರು ಆರೋಪಿಗಳಾದ ಸುಶಾಂತ್, ಅಲೆಕ್ಸ್, ನಿತಿನ್ ಮತ್ತು ಆರೋಪಿಗಳಿಗೆ ಸಹಾಯ ಮಾಡಿದ್ದ ಆರೋಪದ ಮೇಲೆ ಅರುಣ್ ಶೆಟ್ಟಿ ಎಂಬವರನ್ನು ಬಂಧಿಸಿದ್ದರು.





















































 
 
error: Content is protected !!
Scroll to Top