ಬಂಟ್ವಾಳ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಯುವಕ ಸಾವು

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಹೊಳೆನರಸೀಪುರದ ಸಂಜಯ್‌ (25) ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಉಪ್ಪಿನಂಗಡಿ ಅಡ್ಡಹೊಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಸಂಭವಿಸಿದೆ.

ಕಾರು ಚಾಲಕ ಅರಕಲಗೂಡು ನಿವಾಸಿ ಸಂದೀಪ್‌, ಕಾರಿನಲ್ಲಿದ್ದ ಶೇಷ, ಮಹೇಶ್‌ ಅವರು ಅಪಾಯದಿಂದ ಪಾರಾಗಿದ್ದಾರೆ.

ಸಂಜಯ್‌ ಹಾಗೂ ಇತರರು ತಮ್ಮ ತೋಟದಲ್ಲಿ ಬೆಳೆದ ಹೂಗಳನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾರಾಟ ಮಾಡಲು ಉಡುಪಿಗೆ ಬಂದಿದ್ದರು. ಹೂವು ಮಾರಾಟ ಮಾಡಿ ಮತ್ತೆ ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘ‌ಟನೆ ಸಂಭವಿಸಿದೆ.





















































 
 
error: Content is protected !!
Scroll to Top