ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಂಧನ

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.
ಗಿರಿಧರ ರೈ ಪಜಿಂಬಿಲ ಬಂಧಿತ ಆರೋಪಿ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ಗಿರಿಧರ ರೈ ಅ.26ರಂದು ಅಪರಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್ ಬಸ್ ತಂಗುದಾಣದಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ ಜೈಲು





















































 
 

ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಯುವಕನ ವಿರುದ್ಧ ಪೋಕ್ಸೊ ಅಡಿ ಕೇಸ್‌ ದಾಖಲಾಗಿತ್ತು.

ಸುಳ್ಯ ತಾಲೂಕಿನ ಮಡಪ್ಪಾಡಿಯ ಹಾಡಿಕಲ್ಲು ನಿವಾಸಿ ಚೇತನ್‌ ಎಚ್‌.ಬಿ.ಶಿಕ್ಷೆಗೊಳಗಾದ ಆರೋಪಿ. 2022ರ ಜನವರಿ 14ರಂದು ಚೇತನ್‌ ಮೊಬೈಲ್‌ ಟವರ್‌ ತೋರಿಸುವ ನೆಪದಲ್ಲಿ ಮಗುವನ್ನು ಹೊರಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ.

error: Content is protected !!
Scroll to Top