ಸಿಎಂ, ಬಾನು ಮುಷ್ತಾಕ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ವ್ಯಕ್ತಿ ವಶ

ಫೇಸ್‌ಬುಕ್‌ನಲ್ಲಿ ಮುಖ್ಯಮಂತ್ರಿ, ಲೇಖಕಿಯ ಕುರಿತು ಹಾಕಿದ್ದ ಪೋಸ್ಟ್‌ ವಿರುದ್ಧ ದೂರು

ಸುಳ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಕುರಿತು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶದ ಸಹಾಯದಿಂದ ಸುಳ್ಯ ಪೊಲೀಸರು ಬಂಟ್ವಾಳ ತಾಲೂಕಿನ ನಿವಾಸಿ ಪುರುಷೋತ್ತಮ ಆಚಾರ್ಯ ಬರಿಮಾರು ಎಂಬ ವ್ಯಕ್ತಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ದಸರಾ ಉತ್ಸವ ಉದ್ಘಾಟಿಸಿದ ಬಾನು ಮುಷ್ತಾಕ್ ಅವರ ವಿರುದ್ಧ ಫೇಸ್‌ಬುಕ್ ಬಳಕೆದಾರರೊಬ್ಬರು ಅವಹೇಳನಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಸುಳ್ಯ ಮತ್ತು ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಪುರುಷ ಆಚಾರ್ಯ ಎಂಬ ಫೇಸ್‌ಬುಕ್ ಖಾತೆಯಲ್ಲಿ ಬಾನು ಮುಷ್ತಾಕ್ ಮತ್ತು ಮುಖ್ಯಮಂತ್ರಿಯನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡಲಾಗಿದೆ. ಇದರ ನಂತರ, ಸುಳ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) (ಅಪರಾಧ ಸಂಖ್ಯೆ 112/2025) ಸೆಕ್ಷನ್ 296, 196, ಮತ್ತು 354 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 353(3) ಮತ್ತು 353(4) (ಅಪರಾಧ ಸಂಖ್ಯೆ 55/2025) ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.





















































 
 
error: Content is protected !!
Scroll to Top