ಕಾಡಾನೆಯ ದಾಳಿಗೆ ಸಿಲುಕಿ ಇಬ್ಬರು ಸಾವು

ಸೊಪ್ಪು ತರಲು ಹೋದವರ ಮೇಲೆ ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಸಲಗ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಕಾಡಾನೆಯ ಮಾರಕ ದಾಳಿಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ. ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ತಾಲೂಕಿನ ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬಾ ಎಲ್ಸಾರ ಸಮೀಪ ಈ ಘಟನೆ ನಡೆದಿದೆ.

ಮೃತಪಟ್ಟ ಇಬ್ಬರು ದುರ್ದೈವಿಗಳು ಹಸುವಿನ ಕೊಟ್ಟಿಗೆಗೆ ಸೊಪ್ಪು ತರುವುದಕ್ಕಾಗಿ ಸಮೀಪದ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಎದುರಾದ ಕಾಡಾನೆ, ಇಬ್ಬರ ಮೇಲೂ ದಾಳಿ ನಡೆಸಿ ಅವರನ್ನು ಕೊಂದುಹಾಕಿದೆ ಎಂದು ತಿಳಿದುಬಂದಿದೆ. ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.





















































 
 
error: Content is protected !!
Scroll to Top