ನವದೆಹಲಿ: RSS ನಿಷೇಧ ಆಗಬೇಕು ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹಚ್ಚಿದ್ದ ಬೆಂಕಿಗೆ ಅವರ ತಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ವರೆಗೆ ತುಪ್ಪ ಸುರಿವ ಕೆಲಸ ಮಾಡಿದ್ದು, ಇದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ದೇಶದಲ್ಲಿ ಹೆಚ್ಚಿನ ಕಾನೂನು ಸುವ್ಯವಸ್ಥೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದಲೇ ಸೃಷ್ಟಿಯಾಗುತ್ತಿದೆ. ಹೀಗಾಗಿ ಆರ್‌ಎಸ್‌ಎಸ್ ಅನ್ನು ನಿಷೇಧ ಮಾಡಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎನ್ನುವ ಮೂಲಕ ಮತ್ತೆ ಕಿಡಿ ಹಚ್ಚುವ ಕೆಲಸ ಮಾಡಿದ್ದಾರೆ.
ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನದಂದು ಬಿಜೆಪಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಗಾಂಧಿ ಹತ್ಯೆಯ ದುರಂತಕ್ಕೆ ಕಾರಣವಾದ ವಾತಾವರಣ RSS ಸೃಷ್ಟಿ ಮಾಡಿದೆ ಎಂದು ಆಗಿನ ಗೃಹ ಸಚಿವರಾಗಿದ್ದ ಪಟೇಲ್ ಅವರು ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಬರೆದ ಪತ್ರವನ್ನು ಉಲ್ಲೇಖ ಮಾಡಿದ್ದಾರೆ. ಬಿಜೆಪಿ ಯಾವಾಗಲೂ ಪಟೇಲ್ ಮತ್ತು ನೆಹರೂ ನಡುವೆ ಭಿನ್ನತೆ ತರಲು ಪ್ರಯತ್ನ ಪಡುತ್ತದೆ ಎಂದು ಅವರು ಹೇಳಿದ್ದಾರೆ.
























