ನಿಂತಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್‌ ಡಿಕ್ಕಿ: 15 ಮಂದಿ ಸ್ಥಳದಲ್ಲೇ ಸಾವು

ಜೋಧಪುರ್ : ರಾಜಸ್ಥಾನದ ಜೋಧಪುರ್​ನಲ್ಲಿ ಭಾನುವಾರ ರಾತ್ರಿ ನಿಂತಿದ್ದ ಟ್ರಕ್‌ಗೆ ಟೆಂಪೋ ಟ್ರಾವಲರ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೋಧಪುರ್​ನ ಫಾಲೋದಿಯಲ್ಲಿನ ಮಟೋಡ ಗ್ರಾಮದ ಸಮೀಪದ ಭಾರತ್ ಮಾಲಾ ಎಕ್ಸ್​ಪ್ರೆಸ್​ವೇಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಟೆಂಪೋ ಟ್ರಾವೆಲ್‌ನಲ್ಲಿದ್ದವರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರೆಂದು ಹೇಳಲಾಗುತ್ತಿದೆ. ಬಿಕಾನೆರ್​ನ ಕೊಲಾಯತ್ ಮಂದಿರಕ್ಕೆ ಭೇಟಿ ನೀಡಿ ಇವರು ಜೋಧಪುರ್​ಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚುವರಿ ಶುಶ್ರೂಷೆಗಾಗಿ ಗಾಯಾಳುಗಳನ್ನು ಗ್ರೀನ್ ಕಾರಿಡಾರ್ ಮೂಲಕ ಜೋಧಪುರ್​ನಲ್ಲಿರುವ ಆಸ್ಪತ್ರೆಗೆ ಸಾಗಿಸಲಾಯಿತು.

ರಾಜಸ್ಥಾನ್ ಮುಖ್ಯಮಂತ್ರಿ ಭಜನ್​ಲಾಲ್ ಶರ್ಮಾ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಸಾವಿಗೆ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸರಿಯಾಗಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.





















































 
 

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಪಘಾತದಲ್ಲಿ ಜೀವ ಹಾನಿಯಾಗಿರುವುದಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲ.ರೂ. ಪರಿಹಾರ ಘೋಷಿಸಿದ್ದಾರೆ.

ವಿಪರೀತ ವೇಗವೇ ಅಪಘಾತಕ್ಕೆ ಕಾರಣ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಡಿಕ್ಕಿ ತೀವ್ರತೆಗೆ ಟೆಂಪೊ ಟ್ರಾವೆಲರ್‌ನ ಮುಂಭಾಗ ಪೂರ್ಣವಾಗಿ ನಜ್ಜುಗುಜ್ಜಾಗಿದ್ದ ಒಳಗೆ ಸಿಕ್ಕಿಬಿದ್ದಿದ್ದ ಪ್ರಯಾಣಿಕರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

error: Content is protected !!
Scroll to Top