ಅನಿಲ್ ಅಂಬಾನಿ ಒಡೆತನದ 3 ಸಾವಿರ ಕೋಟಿ ರೂ. ಆಸ್ತಿ ಮುಟ್ಟುಗೋಲು: ಯಾಕೆ ಗೊತ್ತಾ?

ನವದೆಹಲಿ: ಜಾರಿ ನಿರ್ದೇಶನಾಲಯವು ಅನಿಲ್ ಅಂಬಾನಿ ಅವರ ರಿಲಯನ್ಸ್ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳ 3000 ಕೋಟಿ ರೂ. ಗಳಿಗೂ ಹೆಚ್ಚಿನ ಆಸ್ತಿಯನ್ನು ಮುಟ್ಟುಗೋಲು ‌ಹಾಕಿದೆ.

ರಿಲಯನ್ಸ್ ಕಂಪನಿಗಳ ವಿರುದ್ಧದ ಹಣ ವರ್ಗಾವಣೆಯ ತನಿಖೆಯ ಭಾಗವಾಗಿ ED ಈ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಅಂಬಾನಿ ಅವರ ಮುಂಬೈನ ಪಾಲಿ ಹಿಲ್‌ ನಲ್ಲಿರುವ ನಿವಾಸವೂ ಸೇರಿದಂತೆ ಅವರ ಕಂಪನಿಗಳ ಇತರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಫೆಡರಲ್ ತನಿಖಾ ಸಂಸ್ಥೆ ಪಿಎಂಎಲ್ಎ ಅಡಿಯಲ್ಲಿ ನಾಲ್ಕು ತಾತ್ಕಾಲಿಕ ಆದೇಶಗಳನ್ನು ಹೊರಡಿಸಿರುವುದಾಗಿದೆ.





















































 
 

ದೆಹಲಿಯ ಮಹಾರಾಜ ರಂಜಿತ್ ಸಿಂಗ್ ಮಾರ್ಗದಲ್ಲಿರುವ ರಿಲಯನ್ಸ್ ಸೆಂಟರ್‌ಗೆ ಸೇರಿದ ಜಮೀನು ಮತ್ತು ರಾಷ್ಟ್ರ ರಾಜಧಾನಿ ನೋಯ್ಡಾ, ಗಾಜಿಯಾಬಾದ್, ಮುಂಬೈ, ಪುಣೆ, ಥಾಣೆ, ಹೈದರಾಬಾದ್, ಚೆನ್ನೈ ಮತ್ತು ಪೂರ್ವ ಗೋದಾವರಿಯಲ್ಲಿರುವ ಹಲವಾರು ಆಸ್ತಿಗಳನ್ನು ಸಹ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

error: Content is protected !!
Scroll to Top