ರೈತರ ಸಂಕಷ್ಟಕ್ಕೆ ‌ಕಿವಿಯಾಗುತ್ತಿಲ್ಲ ರಾಜ್ಯ ಸರ್ಕಾರ: ಬಿ. ವೈ. ವಿಜಯೇಂದ್ರ ಆರೋಪ

ಬೆಳಗಾವಿ: ರೈತರ ಸಂಕಷ್ಟಗಳನ್ನು ಆಲಿಸಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ. ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಬ್ಬು ಟನ್‌ಗೆ 3,500 ರೂ. ನೀಡಬೇಕು ಎಂದು ಬೆಳೆಗಾರರು ಗುರ್ಲಾಪುರ ಬಳಿ ಹೋರಾಟ‌ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಮುಂದಾಳತ್ವ ವಹಿಸಿ ಅವರ ಬೇಡಿಕೆಗಳನ್ನು ಈಡೇರಿಸಬೇಕಿತ್ತು. ಆದರೆ ಸರ್ಕಾರ ಆ ಕೆಲಸ ಮಾಡಿಲ್ಲ. ಆದ್ದರಿಂದ ಆ ರೈತರ ನ್ಯಾಯಯುತ ಬೇಡಿಕೆಗಳಿಗೆ ಬೆಂಬಲ ಸೂಚಿಸಲು ತಾನು ಇಲ್ಲಿಗೆ ಬಂದಿದ್ದೇನೆ ಎಂದು ಅವರು ಹೇಳಿದ್ದಾರೆ.

2014ರಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆದ ವೇಳೆ ಕಬ್ಬಿನ ವಿಚಾರವಾಗಿಯೇ ರೈತ ವಿಠಲ ಅರಭಾವಿ ಪ್ರಾಣ ಕಳೆದುಕೊಂಡರು. ಆಗ ಬಿ.ಎಸ್.ಯಡಿಯೂರಪ್ಪ ಹೋರಾಟ ಮಾಡಿ ಅಂದಿನ ಮುಖ್ಯಮಂತ್ರಿ ಮೇಲೆ ಒತ್ತಡ ತಂದು ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಇಂದು ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ಕಿಂಚಿತ್ತು ಕಾಳಜಿ ತೋರುತ್ತಿಲ್ಲ ಎಂದು ಟೀಕಿಸಿದರು.





















































 
 

ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ವಾರ್ಷಿಕ 6 ಮಿಲಿಯನ್ ಟನ್ ಕಬ್ಬು ನುರಿಸುತ್ತವೆ. ಇದರಿಂದ ರಾಜ್ಯ ಸರ್ಕಾರಕ್ಕೆ 55 ಸಾವಿರ ಕೋಟಿ ತೆರಿಗೆ ಬರುತ್ತದೆ. ರಾಜ್ಯದಲ್ಲಿ ಯಾರ ಸಕ್ಕರೆ ಕಾರ್ಖಾನೆಗಳಿವೆ ಎಂಬುದು ನಿಮಗೆ ಗೊತ್ತಿದೆ. ಸಕ್ಕರೆ ಕಾರ್ಖಾನೆಗಳ ಸಾಹುಕಾರಗಳ ಜೊತೆಗೆ ಸರ್ಕಾರ ಮಾತನಾಡಬೇಕು. ಅಧಿಕಾರಿಗಳು ಸಹ ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆಯುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಹೊಸ ಸಿಎಂ ಬರುತ್ತಾರೆ ಎಂಬ ರಾಮುಲು ಹೇಳಿಕೆ ಪ್ರಸ್ತಾಪಿಸಿ ‘
ರಾಮುಲು ಹೇಳಿದ್ದನ್ನು ಸ್ವತಃ ಆಡಳಿತ ಪಕ್ಷದ ಸಚಿವರು, ಶಾಸಕರೇ ಹೇಳುತ್ತಿದ್ದಾರೆ. ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಯಾವ ರೀತಿ ಯುದ್ದ ಆರಂಭವಾಗಿದೆ ಎಂಬುದು ಬಿಹಾರ ಚುನಾವಣೆ ಫಲಿತಾಂಶದ ನಂತರ ಎಲ್ಲರಿಗೂ ಗೊತ್ತಾಗುತ್ತದೆ ಎಂದರು.

error: Content is protected !!
Scroll to Top