ವಾರಣಾಸಿ: ಮುಂಬೈಗೆ ವಾರಣಾಸಿಯಿಂದ ಹೊರಟಿದ್ದ ವಿಮಾನ ಟೇಕ್ ಆಫ್ ಆಗುವ ಮುನ್ನ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಘಟನೆ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈಗೆ ಸಂಜೆ ಹೊರಟಿದ್ದ ವಿಮಾನದಲ್ಲಿ ನಡೆದಿರುವುದಾಗಿದೆ. ವಿಮಾನ ರನ್ ವೇ ಕಡೆಗೆ ಚಲಿಸುತ್ತಿದ್ದಾಗ ಪ್ರಯಾಣಿಕ ಸುಜಿತ್ ಸಿಂಗ್ ಎಂಬಾತ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ್ದಾನೆ.
ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಕುತೂಹಲದಿಂದ ತಾನು ಈ ಕೆಲಸ ಮಾಡಿದ್ದಾಗಿ ತಿಳಿಸಿದ್ದಾನೆ ಎಂದು ಪಲ್ಪೂರ ಸ್ಟೇಷನ್ ಹೌಸ್ ಅಧಿಕಾರಿಗಳು ಹೇಳಿದ್ದಾರೆ.
























