ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಅವಹೇಳನ: ಯೂಟ್ಯೂಬ್ ಚಾನೆಲ್ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯ ಸರ್ಕಾರ, ಸಿ. ಎಂ. ಸಿದ್ದರಾಮಯ್ಯ, ಡಿ.ಸಿ.ಎಂ. ಡಿ. ಕೆ. ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಚಿತ್ರಗಳನ್ನು ಅವಹೇಳನಕಾರಿ ಎಂಬಂತೆ ಬಳಸಿದ ನ್ಯೂಸ್ ಫ್ಯಾಕ್ಟರಿ-09 ಎಂಬ ಯೂಟ್ಯೂಬ್ ಚಾನೆಲ್ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಎಎಸ್‌ಐ ಅಸ್ಮಾ ಬೇಗಂ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲು ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಭಾವಚಿತ್ರಗಳನ್ನು ಅವಹೇಳನಕಾರಿಯಾಗಿ ರೀಲ್ಸ್ ಮಾಡಿದ್ದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುವುದಾಗಿ ಪೊಲೀಸರು ಹೇಳಿದ್ದಾರೆ.





















































 
 
error: Content is protected !!
Scroll to Top