ಪಿಯುಸಿ ಮಕ್ಕಳಿಗೂ ಬಿಸಿಯೂಟ ನೀಡಲು ಚಿಂತನೆ

ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಕಾರ್ಯಕ್ರಮ

ಬೆಂಗಳೂರು: ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದೂಟ ಕಾರ್ಯಕ್ರಮವನ್ನು ಪಿಯುಸಿ ತನಕ ವಿಸ್ತರಿಸಲು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ. ಪಿಯುಸಿ ಮಕ್ಕಳಿಗೂ ಮಧ್ಯಾಹ್ನ ಬಿಸಿಯೂಟ ನೀಡುವ ಬಗ್ಗೆ ಇಲಾಖೆಗಳ ನಡುವೆ ಸಾಧಕ ಬಾಧಕ ಚರ್ಚೆ ನಡೆಯುತ್ತಿದೆ.

ಸದ್ಯ ಸರ್ಕಾರಿ, ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ನಿತ್ಯ ಬಿಸಿಯೂಟ ನೀಡಲಾಗುತ್ತಿದೆ. ಬಿಸಿಯೂಟವನ್ನು ಸರ್ಕಾರಿ, ಅನುದಾನಿತ ಪಿಯು ಕಾಲೇಜುವರೆಗೂ ವಿಸ್ತರಣೆ ಮಾಡುವ ಸಾಧ್ಯತೆ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಬಿಸಿಯೂಟ ಕಾರ್ಯಕ್ರಮವನ್ನು ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಮಕ್ಕಳಿಗೂ ವಿಸ್ತರಿಸಬಹುದು ಎಂದು ಶಿಕ್ಷಣ ಇಲಾಖೆ ಸಲಹೆ ನೀಡಿದೆ.





















































 
 

ಇದು ಕಾರ್ಯಗತವಾದರೆ ಪಿಯುಸಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಬಗ್ಗೆ ನ.14 ಮಕ್ಕಳ ದಿನಾಚರಣೆಯಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

error: Content is protected !!
Scroll to Top