ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ಖಳನಟ ಹರೀಶ್ ರಾಯ್ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.
ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ್ದ ಅವರು, ಕೆಜಿಎಫ್ ಚಿತ್ರದಲ್ಲಿನ ಚಾಚಾ ಪಾತ್ರದ ನಟನೆಯ ಬಳಿಕ ಕೆಜಿಎಫ್ ಚಾಚಾ ಎಂದೇ ಪರಿಚಿತರಾಗಿದ್ದರು.
























