ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಆತ್ಮಹತ್ಯೆ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ, ರೆಂಕೆದಗುತ್ತು ನಿವಾಸಿ ಅಬ್ದುಲ್ ಬಶೀರ್ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರ ಮೃತದೇಹ ಇಂದು ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿದೆ.

ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.





















































 
 
error: Content is protected !!
Scroll to Top