ಚಿಕ್ಕಮಗಳೂರು: ಕಡೂರಿನ ಬುಕ್ಕಸಾಗರ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಅನಿಲ್ (21) ಎಂಬವರೇ ಮೃತ ದುರ್ದೈವಿ.
ಮೂಲತಃ ಕೇರಳದ ಕಣ್ಣೂರಿನವರಾದ ಅನಿಸ್ ಕಡೂರಿನ ಬಟ್ಟೆ ಅಂಗಡಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ದತ್ತಪೀಠಕ್ಕೆ ತೆರಳಿ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.
ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
























