ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಇಬ್ಬರ ಬಂಧನ

ಸಹಪಾಠಿಯ ಆರೋಗ್ಯ ವಿಚಾರಿಸಲು ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಲ್ಲೆ

ಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾರಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಬಂಧಿತ ಆರೋಪಿಗಳು

ನ.6ರಂದು ಕಾಲೇಜೊಂದರ 9 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ತಮ್ಮ ಸಹಪಾಠಿಯ ಆರೋಗ್ಯ ವಿಚಾರಿಸಲು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಬಂದ ಆರೋಪಿಗಳಾದ ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಎಂಬವರು ವಿದ್ಯಾರ್ಥಿಗಳ ಹೆಸರು, ಕಾಲೇಜ್ ಹಾಗೂ ಊರಿನ ಬಗ್ಗೆ ವಿಚಾರಿಸಿ, ವಿಭಿನ್ನ ಕೋಮುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು, ಕೋಮುದ್ವೇಷದಿಂದ ಅವಾಚ್ಯವಾಗಿ ಬೈದು, ಓರ್ವ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುತ್ತಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.





















































 
 
error: Content is protected !!
Scroll to Top