ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನಡೆಸಲು ಡಿ. 1 ರಿಂದ 19 ರ ವರೆಗೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರ ಮಾಡಿದ ಮನವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.
ಈ ಬಗ್ಗೆ ಕೇಂದ್ರ ಸಚಿವ ಕಿರಣ್ ರಿಜಿಜು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಮುಂಬರುವ ಚಳಿಗಾಲದ ಅಧಿವೇಶನ ನಮ್ಮ ಪ್ರಜಾಪ್ರಭುತ್ವವನ್ನು ಬಲಗೊಳಿಸಲು ಹಾಗೂ ಜನರ ಸೇವೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ನಡೆಯಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದ್ದಾರೆ.
ಜುಲೈ 21ರಂದು ಆರಂಭಗೊಂಡಿದ್ದ ಚಳಿಗಾಲದ ಅಧಿವೇಶನವು ಆಗಸ್ಟ್ 21ರಂದು ನಿಗದಿತ ಸಮಯಕ್ಕಿಂತ ಒಂದು ದಿನದ ಮೊದಲೇ ಮುಕ್ತಾಯಗೊಂಡಿತ್ತು. ಕೋಲಾಹಲದಿಂದಾಗಿ ರಾಜ್ಯಸಭೆ ಮತ್ತು ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿತ್ತು.
























