ಪುಂಜಾಲಕಟ್ಟೆ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ಕ್ರೀಡಾ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಮಹಿಳಾ ಸಬಲೀಕರಣ ಘಟಕ ಮತ್ತು ಸ್ವರಕ್ಷಾ ಫಾರ್ ವಿಮೆನ್ ಟ್ರಸ್ಟ್ ಇವುಗಳ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮ ನಡೆಯಿತು.

November 7ರಂದು ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮವನ್ನು ಸ್ವರಕ್ಷಾ ಫಾರ್ ವಿಮೆನ್ ಟ್ರಸ್ಟ್ (Swaraksha for Women Trust) ಇದರ ಸಂಸ್ಥಾಪಕರಾದ ಶ್ರೀ ಕಾರ್ತಿಕ್ ಎಸ್ ಕಟೀಲ್ ಹಾಗೂ ಇದರ ಉಪಾಧ್ಯಕ್ಷರಾದ ಶ್ರೀಮತಿ ಶೋಭಲತಾ ಸುರೇಶ್ ಇವರು ನಡೆಸಿಕೊಟ್ಟರು.
ಈ ತರಬೇತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ವಿವಿಧ ರೀತಿಯ ದೌರ್ಜನ್ಯಗಳಿಂದ ತಮ್ಮನ್ನು ತಾವೇ ರಕ್ಷಿಸಿಕೊಳ್ಳುವ ತಂತ್ರಗಳನ್ನು ಸಂಪನ್ಮೂಲ ವ್ಯಕ್ತಿಗಳು ತಿಳಿಸಿಕೊಟ್ಟರು. ವಿದ್ಯಾರ್ಥಿನಿಯರಿಗೆ ತುರ್ತು ಪರಿಸ್ಥಿತಿಗಳಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ವಿಧಾನಗಳ ಕುರಿತು ಪ್ರಾಯೋಗಿಕ ಮಾರ್ಗದರ್ಶನವನ್ನು ನೀಡಲಾಯಿತು. ಒಟ್ಟು 350 ವಿದ್ಯಾರ್ಥಿನಿಯರು ಉತ್ಸಾಹದಿಂದ ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
























