ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿಯ ಇನ್ನೊಂದು ವಿಡಿಯೋ ಬಹಿರಂಗ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಆರೋಪ

ಬೆಂಗಳೂರು : ಐಸಿಸ್‌ ಉಗ್ರ ಶಕೀಲ್‌, ವಿಕೃತಕಾಮಿ ಉಮೇಶ್ ರೆಡ್ಡಿಗೆ ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಕೈದಿಗಳ ಮೋಜು ಮಸ್ತಿಯ ಮತ್ತೊಂದು ವಿಡಿಯೋ ಹೊರಬಂದಿದೆ.

ಕೈದಿಗಳು ಮದ್ಯ ಸೇವಿಸಿ ಡಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದು ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ವಿಡಿಯೋಗಳು ಪರಪ್ಪನ ಅಗ್ರಹಾರ ಜೈಲಿನದ್ದಾ ಅಥವಾ ಬೇರೆ ಜೈಲಿನದ್ದಾ ಎಂಬ ಆಯಾಮದಲ್ಲಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಕೈದಿಗಳು ಮದ್ಯ ಸೇವಿಸಿ ಕಬಾಬ್‌ ತಿಂದು, ಪ್ಲೇಟು, ಡ್ರಮ್ ಬಡಿದು ಭರ್ಜರಿ ಸ್ಟೆಪ್ಸ್‌ ಹಾಕಿರುವುದು ವಿಡಿಯೋದಲ್ಲಿದೆ.





















































 
 

ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಅಲರ್ಟ್​ ಆಗಿರುವ ಜೈಲಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್​ಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಒಟ್ಟು 100ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿ ಕೈದಿಗಳ ಬ್ಯಾರಕ್​ಗಳ ಪರಿಶೀಲನೆ ಮಾಡಿದ್ದು, ಪರಿಶೀಲನೆ ವೇಳೆ ಯಾವುದೇ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಬ್ಯಾರಕ್​ಗಳಲ್ಲಿ ಸಿಬ್ಬಂದಿ ಪರಿಶೀಲನೆ ವೇಳೆ ಯಾವುದೇ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ದಾಳಿಯ ಮಾಹಿತಿ ಸೋರಿಕೆ ಆಗಿರುವ ಅನುಮಾನ ವ್ಯಕ್ತವಾಗಿದೆ.

ಪರಪ್ಪನ ಅಗ್ರಹಾರ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವಾಗಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳ ಐಷಾರಾಮಿ ಜೀವನದ ಕುರಿತು ಪರಿಶೀಲನೆಗೆ ಸಮಿತಿ ರಚಿಸಲಾಗುವುದು. ವರದಿ ಬಂದ ನಂತರ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ಘಟನೆ ಸಂಬಂಧ ಚರ್ಚಿಸಲು ಸೋಮವಾರ ನಾನು ಅಧಿಕಾರಿಗಳ ಸಭೆ ಕರೆದಿದ್ದೇನೆ. ಗೃಹ ಸಚಿವರೂ ಸಭೆ ಕರೆದಿದ್ದಾರೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

error: Content is protected !!
Scroll to Top