ದೆಹಲಿ : ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮತ್ತೊಮ್ಮೆ ಮುನ್ನೆಚ್ಚರಿಕೆ ಘೋಷಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಉನ್ನತ ಮಟ್ಟದ ಸಭೆ ನಡೆಸಿ ಎಲ್ಲ ತುರ್ತು ಪರಿಸ್ಥಿತಿಗಳಿಗೆ ಸಿದ್ಧರಾಗಿರುವಂತೆ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ.
ಕೋವಿಡ್-19 ಇನ್ನೂ ಅಂತ್ಯಗೊಂಡಿಲ್ಲ ಎಂಬುದನ್ನು ಒತ್ತಿ ಹೇಳಿದ ಮೋದಿಯವರು, ರೋಗಿಗಳು ಮತ್ತು ಆರೋಗ್ಯ ಕಾರ್ಯಕರ್ತರು ಆಸ್ಪತ್ರೆಯ ಆವರಣದಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ.
ಹಿರಿಯ ನಾಗರಿಕರು ಮತ್ತು ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರು ಜನನಿಬಿಡ ಪ್ರದೇಶದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಿದ್ದಾರೆ.