ನವದೆಹಲಿ: ನವದೆಹಲಿ ಸ್ಪೋಟಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ. ಆ ಕೃತ್ಯ ನಡೆಸಿದವರನ್ನು ಪತ್ತೆ ಮಾಡುವ ಕಾರ್ಯವನ್ನು ಭಾರತೀಯ ತನಿಖಾ ಸಂಸ್ಥೆಗಳು ತ್ವರಿತ ಮತ್ತು ಸಮಗ್ರವಾಗಿ ಮಾಡುತ್ತಿರುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ.
ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಂಪೂರ್ಣ ತನಿಖೆ ನಡೆಸುತ್ತಿವೆ ಎಂದು ಅವರು ದೇಶವಾಸಿಗಳಿಗೆ ಭರವಸೆ ನೀಡಿದ್ದಾರೆ.
ತನಿಖೆಯ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು. ಈ ದುರಂತಕ್ಕೆ ಕಾರಣರಾದವರನ್ನು ನ್ಯಾಯದ ಕಟಕಟೆಗೆ ತಂದು ನಿಲ್ಲಿಸಲಾಗುವುದು ಮತ್ತು ಯಾವುದೇ ಸಂದರ್ಭದಲ್ಲೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ರಾಷ್ಟ್ರಕ್ಕೆ ದೃಢವಾಗಿ ಭರವಸೆ ನೀಡಲು ಬಯಸುತ್ತೇನೆಂದು ತಿಳಿಸಿದ್ದಾರೆ.
ಹಾಗೆಯೇ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ರಕ್ಷಣಾ ಸಚಿವರು ತಮ್ಮ ಸಂತಾಪ ಸೂಚಿಸಿದ್ದಾರೆ.
























