ಬೆಂಗಳೂರು: ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಓಟ್ ಚೋರಿ ಆಗಿದೆ. ಆದರೂ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕಿದೆ ಎಂದು ಸಿ ಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಹಾರದಲ್ಲಿ ಯಾಕೆ ಹಿನ್ನಡೆ ಆಗಿದೆ. ಈ ಬಗ್ಗೆ ಸರಿಯಾದ ಮಾಹಿತಿ ಪಡೆದು ಆ ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ. NDA ಯಾಕೆ ಬಹುಮತ ಪಡೆದಿದೆ. ಅಲ್ಲೂ ಓಟ್ ಚೋರಿ ಆಗಿದೆ. ಆದರೆ ಜನ ತೀರ್ಪು ನಾವು ಒಪ್ಪಬೇಕು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಅಜೆಂಡಾ ಓಬಿಸಿ ಅವರೇ ಬಿಹಾರದಲ್ಲಿ ಕೈ ಹಿಡಿದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಿತೀಶ್ ಕುಮಾರ್ ಯಾರು? ಅವರು ಓಬಿಸಿ ಅಲ್ಲವಾ? ಸಿಡಿಮಿಡಿಗೊಂಡಿದ್ದಾರೆ. ಇದೇ ವೇಳೆ ಮುಧೋಳದಲ್ಲಿ ಕಬ್ಬು ಗಲಾಟೆ ವಿಚಾರವಾಗಿ ಮಾತನಾಡಿ, ಬೇರೆ ಎಲ್ಲಾ ರೈತರು 3,300 ರೂ. ಕಬ್ಬು ರೇಟ್ ಪಡೆಯೋಕೆ ಒಪ್ಪಿಕೊಂಡಿದ್ದಾರೆ. ಆದರೆ ಮುಧೋಳ ರೈತರು ಮಾತ್ರ ಒಪ್ಪಿಕೊಂಡಿಲ್ಲ. ಅವರ ಜೊತೆಗೂ ಮಾತುಕತೆ ನಡೆಯುತ್ತಿದೆ. ಯಾರು ಕಬ್ಬು, ಟ್ರ್ಯಾಕ್ಟರ್, ಟ್ರಾಲಿಗಳನ್ನ ಸುಟ್ಟು ಹಾಕಿದ್ದಾರೆ ಅಂತ ವಿಚಾರಣೆ ಮಾಡಿಸೋಣ. ರೈತರು ನಾವು ಸುಟ್ಟಿಲ್ಲ ಅಂತ ಹೇಳ್ತಿದ್ದಾರೆ. ಅದಕ್ಕಾಗಿಯೇ ವಿಚಾರಣೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ತಿವಿ ಎಂದು ಹೇಳಿದ್ದಾರೆ.
























