ಉಡುಪಿ: ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿರುವ ‘ಸುನಂದಾ ವೆಲ್ನೆಸ್ ಸೆಂಟರ್’ನಲ್ಲಿ ಕೌನ್ಸೆಲಿಂಗ್‌ಗೆ ಬಂದಿದ್ದ ಮಹಿಳೆಯ ದೇಹ ಸ್ಪರ್ಶ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪಿ ನಿರಂಜನ ಶೇಖರ ಶೆಟ್ಟಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ದಾಂಪತ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆ ಕೌನ್ಸಿಲಿಂಗ್‌ಗಾಗಿ ಕಂಕಣಗುತ್ತು ಕಂಪೌಂಡ್‌ನಲ್ಲಿರುವ ವೆಲ್ನೆಸ್ ಸೆಂಟರ್‌ಗೆ ಭೇಟಿ ನೀಡಿದ್ದರು. ಈ ವೇಳೆ ಕೌನ್ಸೆಲಿಂಗ್ ಮಾಡುತ್ತಿದ್ದ ನಿರಂಜನ ಶೇಖರ ಶೆಟ್ಟಿ ದೈಹಿಕ ಸ್ಪರ್ಶ ಮಾಡಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿದೆ.
ಘಟನೆ ಬಳಿಕ ಮಹಿಳೆ ಕಾಪು ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ನೀಡಿದ ಹಿನ್ನೆಲೆಯಲ್ಲಿ, ಅಪರಾಧ ಸಂಖ್ಯೆ 151/2025, ಕಲಂ 74, 75(1), 75(2), 79 BNS ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.ಪೊಲೀಸರು ಆರೋಪಿ ನಿರಂಜನ ಶೇಖರ ಶೆಟ್ಟಿಯನ್ನು ದಸ್ತಗಿರಿ ಮಾಡಿದ್ದು, ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
























