ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೇರಿಕೆ

ಬ್ಯಾಕ್ಟೀರಿಯ ಇನ್‌ಫೆಕ್ಷನ್‌ನಿಂದ ಸಾಯುತ್ತಿರುವ ಪ್ರಾಣಿಗಳು

ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಆ ಮೂಲಕ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೆ ಏರಿಕೆ ಆಗಿದೆ. ಬ್ಯಾಕ್ಟೀರಿಯಾ ಇನ್‌ಪೆಕ್ಷನ್‌ನಿಂದಲೇ ಕೃಷ್ಣಮೃಗಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ನವೆಂಬರ್ 13ರಂದು 8, ಶನಿವಾರ ಒಂದೇ ದಿನ 20, ತಡರಾತ್ರಿ ಒಂದು, ನಿನ್ನೆ ಸಂಜೆ ಗಂಡು ಕೃಷ್ಣಮೃಗ ಸಾವನ್ನಪ್ಪಿವೆ. ಆ ಮೂಲಕ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈವರೆಗೆ 30 ಕೃಷ್ಣಮೃಗಗಳ ಸಾವಾಗಿದೆ. ಕೃಷ್ಣಮೃಗಗಳು ಮೃತಪಟ್ಟ ಪ್ರದೇಶವನ್ನು ಮೃಗಾಲಯದ ಸಿಬ್ಬಂದಿ ನಿರ್ಬಂಧಿಸಿದ್ದಾರೆ. ಸೋಂಕು ಹರಡದಂತೆ ಮೃಗಾಲಯದ ಸಿಬ್ಬಂದಿ ಮುಂಜಾಗ್ರತೆ ಕ್ರಮಕೈಗೊಂಡಿದ್ದು, ಗ್ರೀನ್ ಮ್ಯಾಟ್ ಕಟ್ಟಿ ಸಾರ್ವಜನಿಕರು ಓಡಾಡದಂತೆ ನಿರ್ಬಂಧಿಸಿದ್ದಾರೆ.





















































 
 

ಮೃತ ಕೃಷ್ಣಮೃಗಗಳ ಕಿಡ್ನಿ, ಹಾರ್ಟ್, ಲಿವರ್, ರಕ್ತ ಎಲ್ಲವನ್ನೂ ಸ್ಯಾಂಪಲ್ ಪಡೆದಿದ್ದೇವೆ. ಅವು ಲ್ಯಾಬ್​ಗೆ ರವಾನೆಯಾಗಲಿದ್ದು, ಮಂಗಳವಾರದ ಹೊತ್ತಿಗೆ ಕೃಷ್ಣಮೃಗಗಳ ಸಾವಿನ ಕುರಿತ ವರದಿ ಬರಲಿದೆ. ಬಳಿಕ ಅದನ್ನು ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಅವರಿಗೆ ಸಲ್ಲಿಸುತ್ತೇವೆ ಎಂದು ವೈದ್ಯ ಡಾ.ಚಂದ್ರಶೇಖರ್ ತಿಳಿಸಿದ್ದಾರೆ.

ಗಳಲೆ ರೋಗದಿಂದ ಕೃಷ್ಣಮೃಗಗಳು ಮೃತಪಟ್ಟಿರುವ ಶಂಕೆ ಇದೆ ಎಂದು ಮೃಗಾಲಯಗಳ ಸದಸ್ಯ ಕಾರ್ಯದರ್ಶಿ ಸುನೀಲ್ ತಿಳಿಸಿದ್ದಾರೆ. ಇಂದು ಬೆಳಗ್ಗೆ ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮೃಗಾಲಯ ಕೂಡ ಪರಿಶೀಲನೆ ಆಗಿದೆ. ಘಟನೆಯಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ಕಂಡು ಬಂದಿಲ್ಲ. 8 ಕೃಷ್ಣಮೃಗಗಳು ಮೃತಪಟ್ಟ ಸಂದರ್ಭದಲ್ಲಿಯೇ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಅದಾಗಿಯೂ ಎಲ್ಲಿಯಾದರೂ ಸಿಬ್ಬಂದಿ ತಪ್ಪು ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಈ ನಡುವೆ ಕೃಷ್ಣಮೃಗಗಳು ಮೃತಪಟ್ಟ ಪ್ರಕರಣ ವಿಚಾರವಾಗಿ ಅರಣ್ಯ ಸಚಿವ ಈಶ್ವರ್​ ಖಂಡ್ರೆ ಅವರ ದಿಕ್ಕನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪಿಸಿದ್ದಾರಾ ಎನ್ನುವ ಅನುಮಾನ ವ್ಯಕ್ತವಾಗಿತ್ತು. ಆಹಾರದಿಂದ ಉಂಟಾದ ಸಮಸ್ಯೆಯಲ್ಲಿ ಕೃಷ್ಣಮೃಗಗಳ ಸಾವಾಗಿದೆ ಎಂದು ಸಚಿವರಿಗೆ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದರೆ, ಪ್ರಾಥಮಿಕ ಮಾಹಿತಿ ಪ್ರಕಾರ ಬ್ಯಾಕ್ಟೀರಿಯಾ ಇನ್ಫೆಕ್ಷನ್​ನಿಂದ ಅವು ಮೃತಪಟ್ಟಿವೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು. ಎಫ್​​ಎಸ್​​ಎಲ್​ಗೂ ಸ್ಯಾಂಪಲ್​ ಕಳುಹಿಸಿದ್ದೇವೆ ಎಂದು ಹೇಳುತ್ತಿದ್ದು, ಪ್ರಯೋಗಾಲಯದ ವರದಿ ಬರುವ ಮುನ್ನವೇ ಬ್ಯಾಕ್ಟೀರಿಯಾ ಇನ್ಫೆಕ್ಷನ್​ ಎಂದು ಅಧಿಕಾರಿಗಳು ಹೇಳಿದ್ದೇಗೆ ಎನ್ನುವ ಪ್ರಶ್ನೆ ಉದ್ಭವಿಸಿತ್ತು.

error: Content is protected !!
Scroll to Top