ಸೌದಿಯಲ್ಲಿ ಭೀಕರ ಬಸ್ ಅಪಘಾತ – 45 ಭಾರತೀಯರ ಸಾವು: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಸೌದಿ ಅರೇಬಿಯಾದ ಮದೀನಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟ 45 ಭಾರತೀಯರ ಸಾವಿಗೆ ಸಂತಾಪ ವ್ಯಕ್ತಪಡಿಸಿ ಪ್ರಧಾನಿ ಮೋದಿ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಮದೀನಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತೀಯ ಪ್ರಜೆಗಳು ಸಾವನ್ನಪ್ಪಿದ ವಿಚಾರ ತಿಳಿದು ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನಾವು ಸದಾ ಇರುತ್ತೇವೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ರಿಯಾದ್‌ನಲ್ಲಿರುವ ನಮ್ಮ ರಾಯಭಾರ ಕಚೇರಿ ಮತ್ತು ಜೆಡ್ಡಾದ ಕಾನ್ಸುಲೇಟ್ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದೆ. ನಮ್ಮ ಅಧಿಕಾರಿಗಳು ಸೌದಿ ಅರೇಬಿಯಾ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.





















































 
 
error: Content is protected !!
Scroll to Top