ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ಹಾಗೆ ಮೂವರು ಆರೋಪಿಗಳಿಗೆ ಹತ್ತು ಸಾವಿರ ರೂ. ದಂಡ ಮತ್ತು ಒಂದು ವರ್ಷ ಸಾದಾ ಜೈಲು ಶಿಕ್ಷೆ ಪ್ರಕಟಿಸಿ ನ್ಯಾಯಾಲಯ ಆದೇಶ ನೀಡಿದೆ.
ಆರೋಪಿಗಳನ್ನು ಸಲೀಂ ಹುಸೇನ್, ಶಹಜ್ ಅಹಮದ್, ಮಹಮದ್ ಶಾಫಿ ಎಂದು ಗುರುತಿಸಲಾಗಿದೆ.
ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ, ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿರುವುದಾಗಿದೆ.
























