ಧರ್ಮಸ್ಥಳ ಪ್ರಕರಣ : ಎಸ್‌ಐಟಿಯಿಂದ ಕೋರ್ಟ್‌ಗೆ ವರದಿ ಸಲ್ಲಿಕೆ

ಸುಳ್ಳು ಸಾಕ್ಷಿ ಕುರಿತು ತನಿಖೆಯಿಂದ ಕಂಡುಕೊಂಡ ಮಾಹಿತಿಗಳ ವರದಿ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ.20 ರಂದು ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಗಳ ಬಗ್ಗೆ ವರದಿಯನ್ನು ಸಲ್ಲಿಸಿದ್ದಾರೆ.

ಎಸ್.ಐ.ಟಿ ಅಧಿಕಾರಿಗಳು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿ ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ವರದಿಯನ್ನು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ವಿಜಯೇಂದ್ರ ಎಚ್.ಟಿ ಮುಂದೆ ನ.20ರಂದು ಮಧ್ಯಾಹ್ನ 3.15ಕ್ಕೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ತಂಡದವರು ಸಲ್ಲಿಕೆ ಮಾಡಿದ್ದಾರೆ.





















































 
 

ಎಸ್‌ಐಟಿ ವರದಿಯಲ್ಲಿ ಸುಮಾರು 3,923 ಪುಟಗಳನ್ನು ನಮೂದಿಸಿದ್ದಾರೆ. ಐದು ಮಂದಿ ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬುವುದಾಗಿಯೂ ವರದಿಯಲ್ಲಿ ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದ ವರದಿಯಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ.

ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ವರದಿಯ ಬಗ್ಗೆ ನ್ಯಾಯಾಲಯ ಪರಿಶೀಲಿಸಿ ಇದರ ಆಧಾರದಲ್ಲಿ ಮುಂದಿನ ತನಿಖೆ ಬಗ್ಗೆ ನ್ಯಾಯಾಲಯ ಸೂಚನೆ ನೀಡುವಂತೆ ವರದಿಯಲ್ಲಿ ಕೇಳಿಕೊಳ್ಳಲಾಗಿರುವುದಾಗಿ ತಿಳಿದು ಬಂದಿದೆ. ಒಟ್ಟು ಪ್ರಕರಣದ ತನಿಖೆ ಮುಗಿಸಿದ ಬಳಿಕ ಮುಂದಿನ ದಿನಗಳಲ್ಲಿ ಅಂತಿಮ ಚಾರ್ಜ್‌ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ.

ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಜೊತೆಗೆ ಮುಂದಿನ ತನಿಖೆಯ ಬಗ್ಗೆ ಮಾರ್ಗದರ್ಶನ ಕೋರಿ ವಾದ ಮಂಡಿಸಲಾಗಿದೆ. ಈವರೆಗಿನ ತನಿಖೆ ಕುರಿತ ಮಧ್ಯಂತರ ಚಾರ್ಜ್​​ಶೀಟ್ ಪರಿಗಣಿಸಿ ಮುಂದಿನ ತನಿಖೆಗೆ ಎಸ್ಐಟಿ ಅಧಿಕಾರಿಗಳು ನಿರ್ದೇಶನ ಕೋರಿದ್ದಾರೆ. ಎಸ್ಐಟಿ ಸಲ್ಲಿಸಿದ ಮನವಿ ಸ್ವೀಕರಿಸಿದ ಜಡ್ಜ್, ಎಸ್‌ಐಟಿ ಪರ ವಕೀಲರ ವಾದ ಆಲಿಸಿ ವಿಚಾರಣೆ ಮುಂದೂಡಿದ್ದು, ಶುಕ್ರವಾರ ನಿರ್ದೇಶನ ನೀಡುವ ಸಾಧ್ಯತೆ ಇದೆ. ಬೆಳ್ತಂಗಡಿ ಕೋರ್ಟ್ ವರದಿ ಸಲ್ಲಿಕೆ ಬಳಿಕ ಡಿಜಿಪಿ ಎಸ್​ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಸರ್ಕಾರಕ್ಕೂ ವರದಿ ನೀಡಲಿದ್ದಾರೆ.

error: Content is protected !!
Scroll to Top