ಮಡಿಕೇರಿ: ಭಾನುವಾರ ರಾತ್ರಿ ಗೋಣಿಕೊಪ್ಪದಲ್ಲಿ ನಡೆದ ಭೀಕರ ಅಪಘಾತ ಒಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಕೈಕೇರಿ ಸಮೀಪ ಈ ದುರಂತ ನಡೆದಿದೆ. ವೇಗವಾಗಿ ಬಂದ ವಾಹನವೊಂದು ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರ ತಲೆ ಮತ್ತು ಎದೆಯ ಭಾಗಕ್ಕೆ ತೀವ್ರ ಪ್ರಮಾಣದ ಗಾಯಗಳಾಗಿವೆ. ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ.
ಢಿಕ್ಕಿ ಹೊಡೆದ ವಾಹನ ಸ್ಥಳದಿಂದ ಪರಾರಿಯಾಗಿದೆ. ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
























