ಬೆಂಗಳೂರು: ಮುರುಘಾ ಮಠದ ವಸತಿ ನಿಲಯದ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ನಿರ್ದೋಷಿ ಎಂದು ನ್ಯಾಯಾಲಯ ತೀರ್ಪಿತ್ತಿದೆ.
2022ರ ಆಗಸ್ಟ್ 26 ರಂದು ಮೈಸೂರಿನ (Mysuru) ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3 ವರ್ಷಗಳ ಸುದೀರ್ಘ ತನಿಖೆ ಬಳಿಕ ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾ.ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠ ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಮೊದಲ ಪ್ರಕರಣ ಖುಲಾಸೆಯಾಗಿದೆ.
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸ್ ಕೇಸ್ (POCSO Case) ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಕೇಸ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.
























