ಕುರ್ಚಿ ಕಚ್ಚಾಟ : ಇಂದು ಸಿದ್ದರಾಮಯ್ಯ-ಡಿಕೆಶಿ ನೇರ ಮಾತುಕತೆ

ಮುಖ್ಯಮಂತ್ರಿ ನಿವಾಸದಲ್ಲಿ ಸಿಎಂ-ಡಿಸಿಎಂ ನಡುವೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌

ಬೆಂಗಳೂರು: ಅಧಿಕಾರ ಹಂಚಿಕೆ ಗುದ್ದಾಟದ ನಡುವಯೇ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ನೇರ ಮಾತುಕತೆ ನಡೆಯಲಿರುವುದು ಕುತೂಹಲ ಕೆರಳಿಸಿದೆ. ಕುರ್ಚಿ ಕಚ್ಚಾಟ ಶುರುವಾದ ಬಳಿಕ ಬಹಳ ಸಮಯದ ಬಳಿಕ ಹೀಗೆ ಸಿಎಂ ಮತ್ತು ಡಿಸಿಎಂ ಮುಖಾಮುಖಿಯಾಗುತ್ತಿದ್ದಾರೆ.

ಸಿಎಂ ನಿವಾಸ ಕಾವೇರಿಯಲ್ಲಿ ಬೆಳಗ್ಗೆ 9.30ಕ್ಕೆ ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್‌ ಮೀಟಿಂಗ್ ನಡೆಯಲಿದೆ ಎನ್ನಲಾಗಿದೆ. ಮೊದಲು ನೀವಿಬ್ಬರು ಮಾತನಾಡಿಕೊಂಡು ಸ್ಪಷ್ಟತೆಗೆ ಬನ್ನಿ, ಯಾವುದೇ ಗೊಂದಲ ಇಟ್ಟುಕೊಂಡು ದೆಹಲಿಗೆ ಬರದಂತೆ ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ಈ ನಿರ್ಧಾರಕ್ಕೆ ಬರಲಾಗಿದೆ.
ನಿನ್ನೆ ಸಚಿವ ಮುನಿಯಪ್ಪ ಜೊತೆ ಎಂಎಲ್‍ಸಿ ಬಿ.ಕೆ.ಹರಿಪ್ರಸಾದ್ ಬ್ರೇಕ್‍ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ಈ ಸಭೆಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಚಂದ್ರಪ್ಪ ಕೂಡ ಭಾಗವಹಿಸಿದ್ದರು.





















































 
 

ಗುರುವಾರ (ನ.27) ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹದೇವಪ್ಪ ಜೊತೆ ಬಿ.ಕೆ ಹರಿಪ್ರಸಾದ್ ಬ್ರೇಕ್‍ಫಾಸ್ಟ್ ಮೀಟಿಂಗ್ ನಡೆಸಿದ್ದರು. ಮತ್ತದೇ ನೆಪದಲ್ಲಿ ನಿನ್ನೆ ಕೂಡ ಮುನಿಯಪ್ಪ ಜೊತೆ ಚರ್ಚಿಸಿದ್ದಾರೆ. ಆದಷ್ಟು ಬೇಗ ಹೈಕಮಾಂಡ್ ಕರೆಸಿ ಮಾತಾಡಿ ಗೊಂದಲ ಬಗೆಹರಿಸಬೇಕು. ಗೊಂದಲದಿಂದ ನಮ್ಮ ಸರ್ಕಾರದ ಕಾರ್ಯಕ್ರಮಗಳು ಜನರಿಗೆ ಕಾಣುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು. ಇನ್ನು ಹರಿಪ್ರಸಾದ್ ಪ್ರತಿಕ್ರಿಯಿಸಿ ಹಳೆಯ ಸ್ನೇಹಿತರು. ಹಾಗಾಗಿ ಭೇಟಿ ಮಾಡಿದ್ವಿ.. ಪವರ್ ಶೇರಿಂಗ್ ವಿಚಾರದಲ್ಲಿ ಆದಷ್ಟು ಬೇಗ ಎಐಸಿಸಿ ಅಧ್ಯಕ್ಷರು, ಹೈಕಮಾಂಡ್ ಗೊಂದಲ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ನಡುವೆ ಸಿದ್ದರಾಮಯ್ಯ ಸೋಷಿಯಲ್‌ ಮೀಡಿಯಾದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್‌ನವರು ನವದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

error: Content is protected !!
Scroll to Top