ಇಂದು ರಾಂಚಿಯಲ್ಲಿ ಭಾರತ-ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ

ಟೆಸ್ಟ್‌ ಸೋಲಿನ ಸೇಡನ್ನು ಏಕದಿನದಲ್ಲಿ ತೀರಿಸುವ ತವಕದಲ್ಲಿ ಇಂಡಿಯಾ ಟೀಮ್‌

ರಾಂಚಿ : ದಕ್ಷಿಣ ಆಫ್ರಿಕ ಜೊತೆಗಿನ ಟೆಸ್ಟ್‌ ಸರಣಿಯಲ್ಲಿ 2-0 ಅಂತರದಿಂದ ಸೋತು ಸುಣ್ಣವಾಗಿರುವ ಭಾರತ ಇಂದಿನಿಂದ ಏಕದಿನ ಸರಣಿಯನ್ನು ಆಡಲಿದೆ. ಭಾನುವಾರದಿಂದ ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ರಾಂಚಿಯ ಜೆಎಸ್​ಸಿಎ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿಯು ಮಧ್ಯಾಹ್ನ 2 ಗಂಟೆಯಿಂದ ಶುರುವಾಗಲಿದೆ. ಇದಕ್ಕೂ ಮುನ್ನ 1.30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಟೆಸ್ಟ್‌ ಸೋಲಿನ ಸೇಡನ್ನು ಭಾರತ ಏಕದಿನದಲ್ಲಾದರೂ ತೀರಿಸಲಿ ಎನ್ನುವುದು ಭಾರತದ ಕ್ರಿಕೆಟ್‌ ಅಭಿಮಾನಿಗಳ ಹಾರೈಕೆ. ತಂಡದಲ್ಲಿ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮ ಇರುವುದರಿಂದ ಅಭಿಮಾನಿಗಳ ನಿರೀಕ್ಷೆ ಹೆಚ್ಚೇ ಇದೆ.





















































 
 

ಭಾರತ ಮತ್ತು ದಕ್ಷಿಣ ಆಫ್ರಿಕಾ ಒಟ್ಟು ಮೂರು ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲ ಮ್ಯಾಚ್ ಇಂದು ರಾಂಚಿಯಲ್ಲಿ ನಡೆದರೆ, ದ್ವಿತೀಯ ಪಂದ್ಯವು ರಾಯ್​​ಪುರದಲ್ಲಿ ನಡೆಯಲಿದೆ. ಹಾಗೆಯೇ ಕೊನೆಯ ಮ್ಯಾಚ್​​ಗೆ ವಿಶಾಖಪಟ್ಟಣದ ಎಸಿಎ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

ಮೊದಲ ಏಕದಿನ ಪಂದ್ಯ- ನವೆಂಬರ್ 30 – ರಾಂಚಿ, ಎರಡನೇ ಏಕದಿನ ಪಂದ್ಯ- ಡಿಸೆಂಬರ್ 3 – ರಾಯ್‌ಪುರ, 3ನೇ ಏಕದಿನ ಪಂದ್ಯ ಡಿಸೆಂಬರ್ 6 – ವಿಶಾಖಪಟ್ಟಣಂದಲ್ಲಿ ನಡೆಯಲಿದ್ದು ಎಲ್ಲ ಪಂದ್ಯಗಳು ಮಧ್ಯಾಹ್ನ 2 ಗಂಟೆಗೆ ಶುರುವಾಗಲಿವೆ.

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಒಟ್ನೀಲ್ ಬಾರ್ಟ್‌ಮ್ಯಾನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಟ್ಝ್​​ಕೆ, ಡೆವಾಲ್ಡ್ ಬ್ರೆವಿಸ್, ನಾಂಡ್ರೆ ಬರ್ಗರ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಝಿ, ರೂಬಿನ್ ಹರ್ಮನ್, ಕೇಶವ್ ಮಹಾರಾಜ್, ಮಾರ್ಕೊ ಯಾನ್ಸೆನ್, ಐಡೆನ್ ಮಾರ್ಕ್ರಾಮ್, ಲುಂಗಿ ಎನ್​​ಗಿಡಿ, ರಯಾನ್ ರಿಕೆಲ್ಟನ್, ಪ್ರೆನೆಲನ್ ಸುಬ್ರಯೆನ್.

error: Content is protected !!
Scroll to Top