ಪುತ್ತೂರು: ನಿಡ್ಪಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು.
ಶಾಸಕ ಸಂಜೀವ ಮಠಂದೂರು ಪಂಚಾಯಿತಿ ಕಟ್ಟಡ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಭ್ರಷ್ಟಾಚಾರ ಮುಕ್ತ ಆಡಳಿತ ಮಾಡುತ್ತಿದೆ. ನಾಗರಿಕರ ಅರೋಗ್ಯಕ್ಕೆ ಮೊದಲ ಪ್ರಾಮುಖ್ಯತೆ ನೀಡುವುದರ ಜತೆಗೆ ಮೂಲಭೂತ ಸೌಕರ್ಯಗಳಾದ ಶಿಕ್ಷಣ, ರಸ್ತೆ ಅಭಿವೃದ್ಧಿ, ಹೀಗೆ ನೂರಾರು ಯೋಜನೆಗಳನ್ನು ಅನುಷ್ಠಾನ ಮಾಡಿದೆ. ಜಾಲಜೀವನ್ ಮಿಷನ್, ನರೇಗಾ ಸೇರಿದಂತೆ ಇನ್ನಿತರ ಯೋಜನೆಗಳಿಗೆ ಅನುದಾನ ನೀಡಿ ಅಂತರ್ಜಲ ಅಭಿವೃದ್ಧಿ, ಕಿಂಡಿ ಆನಣೆಕಟ್ಟು, ಸಣ್ಣ ನೀರಾವರಿ ಯೋಜನೆಯಡಿ ಏತ ನೀರಾವರಿ ಯೋಜನೆ ಅನುಷ್ಠಾನ ಮಾಡುವ ಕೆಲಸ ಕಾರ್ಯಗಳನ್ನು ಮಾಡಿದೆ ಎಂದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಒದಗಿಸಿದ್ದರೆ ಅದು ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಮೊದಲಾಗಿದೆ ಎಂದು ಹೇಳಿದರು.
ನರೇಗಾ ಯೋಜನೆ ಎಡಿ ಶೈಲಜಾ ಭಟ್ ಮಾತನಾಡಿ, ನರೇರಾ ಯೋಜನೆಯನ್ನು ಹೆಚ್ಚಾಗಿ ಬಳಸಿಕೊಂಡದಿದ್ದರೆ ಅದು ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಎಂದರು.
ನಿಡ್ಪಳ್ಳಿ ಪಂಚಾಯಿತಿ ಅಧ್ಯಕ್ಷೆ ಗೀತಾ ಉಪಸ್ಥಿತರಿದ್ದರು. ಉಪಾಧ್ಯಕ್ಷ ವೆಂಕಟರಮಣ ಬೋರ್ಕರ್ ಪ್ರಾಸ್ತವಿಕವಾಗಿ ಮಾತನಾಡಿದರು. ಜಿಲ್ಲಾ ಓಬಿಸಿ ಮೋರ್ಚಾದ ಆರ್.ಸಿ.ನಾರಾಯಣ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ರಾಜಾರಾಮ್. , ರಾಕೇಶ್ ಉಪಸ್ಥಿತರಿದ್ದರು. ಭಾಗೀರಥಿ ಪ್ರಾರ್ಥನೆ ಹಾಡಿದರು. ಅಭಿವೃದ್ಧಿ ಅಧಿಕಾರಿ ಸಂಧ್ಯಾ ಲಕ್ಷ್ಮಿ ಸ್ವಾಗತಿಸಿದರು.