ಕೋಳಿ ಅಂಕಕ್ಕೆ ದಾಳಿ : ಮೂವರು ಪೊಲೀಸ್‌ ವಶ

ಬಂಟ್ವಾಳ : ವೀರಕಂಭ ಗ್ರಾಮದ ಪಾತ್ರತೋಟ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ಮೂವರನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ. ಇಡ್ಕಿದು ನಿವಾಸಿ ಉಮೇಶ (38), ಅನಂತಾಡಿ ನಿವಾಸಿ ಅಣ್ಣು (38), ವೀರಕಂಭ ನಿವಾಸಿ ಉಮೇಶ್ (30) ಎಂಬವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.

ಆರೋಪಿಗಳು ಅಕ್ರಮವಾಗಿ ಕೋಳಿಅಂಕದಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಬಿ.ಎಸ್ ನಾಯಕ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕ ಗುಡ್ಡೆಯಲ್ಲಿ ಕೆಲವರು ಗುಂಪು ಸೇರಿ ಹಣ ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ಆಡುತ್ತಿದ್ದರು.

ಆರೋಪಿಗಳ ತಪಾಸಣೆಯ ವೇಳೆ ಜೂಜಾಟಕ್ಕೆ ಬಳಸಿದ್ದ ರೂ 2,100 ರೂ. ನಗದು ಪತ್ತೆಯಾಗಿದ್ದು, ಸ್ಥಳದಲ್ಲಿ ಕೋಳಿ ಅಂಕಕ್ಕೆ ಬಳಸಿದ 5 ಕೋಳಿಗಳು, ಕೋಳಿ ಅಂಕಕ್ಕೆ ಬಳಸಿದ ಕತ್ತಿ ಹಾಗೂ ದಾರಗಳು ಪತ್ತೆಯಾಗಿರುತ್ತದೆ. ಈ ಸೊತ್ತುಗಳನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





















































 
 
error: Content is protected !!
Scroll to Top