ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

ಮಲ್ಪೆ: ಕೊಡವೂರು ಗ್ರಾಮದ ಮೂಡಬೆಟ್ಟು ಸರ್ಕಾರಿ ಶಾಲೆಯ ಸಮೀಪ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ದಿನೇಶ್ (37) ಎಂಬವರೇ ಮೃತ ದುರ್ದೈವಿ.

ಮೃತ ದಿನೇಶ್ ಅವರು ಗರಡಿಮಜಲಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕಳೆದ ಎರಡು ತಿಂಗಳಿನಿಂದ ಕೆಲಸವಿಲ್ಲದೆ ಇದ್ದರು ಎಂದು ತಿಳಿದು ಬಂದಿದೆ.





















































 
 

ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top