ಕಡಬ : ತಡರಾತ್ರಿ ಮನೆಗೆ ನುಗ್ಗಿದ ಹೆಡ್‌ಕಾನ್‌ಸ್ಟಬಲ್‌ನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಊರವರು

ಮನೆಯವರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನ

ಕಡಬ : ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದ ಕಡಬ ಠಾಣಾ ಹೆಡ್‌ಕಾನ್‌ಸ್ಟೇಬಲ್‌ನನ್ನು ಊರವರೇ ಹಿಡಿದು ಧರ್ಮದೇಟು ಬಿಗಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಕಡಬ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ರಾಜು ನಾಯ್ಕ್ ಆರೋಪಿ. ಮನೆಯವರ ಕೈಗೆ ಸಿಕ್ಕಿಬಿದ್ದಾಗ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೊಬ್ಬರಿಗೆ ಈತ ಹಲ್ಲೆ ನಡೆಸಿದ್ದಾನೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ.





















































 
 

ಈತ ತಡರಾತ್ರಿ ಕೊಯಿಲ ನಿವಾಸಿ ಹರೀಶ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಗೈದಿದ್ದು, ಈ ವೇಳೆ ಮನೆ ಮಂದಿ ಹಿಡಿದಿದ್ದಾರೆ ಎನ್ನಲಾಗಿದೆ. ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಚೇತನ್ ಎಂಬವರಿಗೆ ಹಲ್ಲೆಗೈದಿದ್ದಾನೆ. ಈ ಬಗ್ಗೆ ಕೊಯಿಲ ನಿವಾಸಿ ಬಾಬು ಗೌಡ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರಾಜು ನಾಯ್ಕ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!
Scroll to Top