ಕಾರು ಅಪಘಾತದಲ್ಲಿ ಇನ್‌ಸ್ಪೆಕ್ಟರ್‌ ಸಜೀವ ದಹನ

ಡಿವೈಡರ್‌ಗೆ ಡಿಕ್ಕಿಯಾದ ಕಾರಿಗೆ ಬೆಂಕಿ ಹತ್ತಿಕೊಂಡು ದುರಂತ

ಬೆಂಗಳೂರು : ಧಾರವಾಡದಲ್ಲಿ ಶುಕ್ರವಾರ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದ ಭೀಕರ ಅಪಘಾತದಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಒಬ್ಬರು ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್​​​ ಪಂಚಾಕ್ಷರಿ ಸಾಲಿಮಠ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಸಾಲಿಮಠ ಅವರು ಇಂದು ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಡಿವೈಡರ್​​ಗೆ ಡಿಕ್ಕಿಯಾಗಿ ಬಳಿಕ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಧಗಧಗ ಹೊತ್ತಿ ಉರಿದಿದೆ. ಇದರಿಂದಸಾಲಿಮಠ ಅವರು ಲಾಕ್ ತೆಗೆದು ಹೊರಬರಲಾಗದೆ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದರೆ ಅಷ್ಟರೊಳಗೆ ಇನ್ಸ್​ಪೆಕ್ಟರ್​ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.





















































 
 

ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುಲು ಹೋಗುತ್ತಿದ್ದರು. ಇತ್ತೀಚೆಗಷ್ಟೆ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಪ್ರಕರಣ ಮಾಸುವ ಮುನ್ನೇ ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟರ್​​ ಬಲಿಯಾಗಿದ್ದಾರೆ.

error: Content is protected !!
Scroll to Top