ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಅವರ
ಪರಿನಿರ್ವಾಣ ದಿನಾಚರಣೆಯ ಉದ್ಘಾಟನ ಕಾರ್ಯಕ್ರಮದಲ್ಲಿ ಪುತ್ತೂರಿನ ಬಾಲ ಕಲಾವಿದೆ ಸೋನಿಕಾ ಜನಾರ್ದನ್ ಸಂವಿಧಾನ ಪೀಠಿಕೆ ಗಾಯನದ ಮೂಲಕ ಅಪಾರ ಮೆಚ್ಚುಗೆ ಗಳಿಸಿದರು.

ಮೈಸೂರಿನ ದಸರಾ ವಸ್ತು ಪ್ರದರ್ಶನ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಬಾಲ ಕಲಾವಿದೆ ಸೋನಿಕಾ ಜನಾರ್ದನ್ ಅವರನ್ನು ಪ್ರಶಂಸಾ ಪತ್ರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ರುದ್ರೇಶ್, ಸಾಂಸ್ಕೃತಿಕ ಉಪ ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ್ ಎಸ್., ಉಪಾಧ್ಯಕ್ಷರುಗಳಾದ ಮೆಲ್ಲಹಳ್ಳಿ ರಾಜೇಶ್ ಸಿ. ಗೌಡ, ರಂಗಸ್ವಾಮಿ ಸಿ. ಪಾಪು , ಶಿವಲಿಂಗಯ್ಯ ಜಿ., ಕನ್ನಡ ಸರಿಗಮಪದ ಜ್ಯೂರಿ ಮೆಂಬರ್, ಹಿರಿಯ ಸಂಗೀತ ಕಲಾವಿದ ಗಣೇಶ್ ಭಟ್ ಸೇರಿದಂತೆ ಸಾಂಸ್ಕೃತಿಕ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
























