ಕಡಬ: ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇಲ್ಲಿನ ವಾರ್ಷಿಕೋತ್ಸವ ಡಿ. 13 ರಂದು ನಡೆಯಲಿದ್ದು, ಆ ಹಿನ್ನೆಲೆ ಇಂದು ಹಿರಿಯ ವಿದ್ಯಾರ್ಥಿ ಸಂಘದ ಕ್ರೀಡಾಕೂಟ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಚಂದ್ರ ಬರೆಪ್ಪಾಡಿ, ಕಾರ್ಯದರ್ಶಿ ನಾಗೇಶ್ ಕೆಡೆಂಜಿ, ಮುಖ್ಯ ಗುರು ಮಿನಿ ವರ್ಗೀಸ್, ಎಸ್.ಡಿ.ಎಂ.ಸಿ. ಅಧ್ಯಕ್ಷ ದೇವರಾಜ್ ನೂಜಿ, ಕೋಶಾಧಿಕಾರಿ ಯಶೋದರ ಕೆಡೆಂಜಿಕಟ್ಟ , ಯೋಗೀಶ್ ಬರೆಪ್ಪಾಡಿ ,ಉಮೇಶ್ ಕೆರೆನಾರು,ಚಿದಾನಂದ ಕೆರೆನಾರು,ನಿವೃತ್ತ ಮುಖ್ಯ ಗುರುಗಳಾದ ಕುಶಾಲಪ್ಪ ಗೌಡ ಬರಮೇಲು ಸೇರಿದಂತೆ ಹಿರಿಯ ವಿದ್ಯಾರ್ಥಿ ಸಂಘದ ವಿವಿಧ ಪದಾಧಿಕಾರಿಗಳು, ಶಿಕ್ಷಕ ವೃಂದದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

