ಜೈಲಿನಲ್ಲಿ ಸಹಕೈದಿಗಳೊಂದಿಗೆ ದರ್ಶನ್‌ ಜಗಳ?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಹಕೈದಿಗಳಿಗೆ ಟಾರ್ಚರ್‌ ನೀಡುತ್ತಿರುವ ಆರೋಪ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಟ ದರ್ಶನ್‌ ಸಹ ಕೈದಿಗಳ ಜಗಳವಾಡಿ ಸಮಸ್ಯೆ ಸೃಷ್ಟಿಸುತ್ತಿದ್ದಾನೆ ಎಂಬ ದೂರು ಕೇಳಿಬಂದಿದೆ.

ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾನೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾನೆ.





















































 
 

ದರ್ಶನ್ ಜೊತೆ ಒಂದೇ ಸೆಲ್​ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್​ನ್ಲಿ ಜೈಲು ಸೇರಿದವರು. ನಾಗರಾಜುವನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾನೆ ಎಂಬ ದೂರು ಕೇಳಿಬಂದಿದೆ.

ಕೆಲ ದಿನದ ಹಿಂದೆ ದರ್ಶನ್ ಸೆಲ್‌ನಲ್ಲಿ‌ ದೊಡ್ಡ ಜಗಳ ನಡೆದು ಹೋಗಿದೆ. ಜಗ್ಗ ಹಾಗೂ ದರ್ಶನ್ ಮಧ್ಯೆ ದೊಡ್ಡ ಜಗಳ ಆಗಿದೆಯಂತೆ. ಇಬ್ಬರ ಜಗಳ ಜೋರಾಗುತ್ತಿದ್ದಂತೆ ಜೈಲಧಿಕಾರಿಗಳು ಬಂದು ಜಗಳ ಬಿಡಿಸಿದ್ದಾರೆ. ಮಲಗಿದ್ದ ಸಹಕೈದಿಗಳನ್ನು ಕಾಲಿನಲ್ಲಿ ಒದ್ದು ಎಬ್ಬಿಸಿ ದರ್ಶನ್ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.

ವಕೀಲರ ನೇಮಕ ವಿಚಾರವಾಗಿಯೂ ನಡುವೆ ಗಲಾಟೆ ಶುರುವಾಗಿದೆ. ನಾನು ಇಲ್ಲೆ ಸಾಯುವುದಾಗಿ ಅನುಕುಮಾರ್ ಹೇಳಿಕೊಂಡಿದ್ದಾನಂತೆ. ಅನುಕುಮಾರ್​ಗೆ ಜಾಮೀನು ಸಿಗುತ್ತಿಲ್ಲ ಎಂಬುದು ಒಂದು ಕಡೆಯಾದರೆ, ದರ್ಶನ್ ಚಿತ್ರಹಿಂಸೆ ತಡೆಯಲಾಗುತ್ತಿಲ್ಲ ಅನ್ನೋದು ಮತ್ತೊಂದು ಕಡೆ. ಹೀಗಾಗಿ, ದರ್ಶನ್ ಸೆಲ್​ ಮೇಲೆ ವಿಶೇಷ ಕಾಳಜಿ ಇಡಲಾಗಿದೆ. ಟಾರ್ಚರ್ ತಡೆಯಲಾರದೆ ಅನುಕುಮಾರ್, ಜಗದೀಶ್ ತಮ್ಮನ್ನು ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಿದ್ದಾರೆ.

error: Content is protected !!
Scroll to Top