ನೇಣು ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಾಗ ಹಗ್ಗ ತುಂಡಾಗಿ ಗಾಯಗೊಂಡಿದ್ದ ಕಾರ್ಮಿಕ

ಸುಳ್ಯ: ಆತ್ಮಹತ್ಯೆಗೆ ಪ್ರಯತ್ನಿಸಿದಾಗ ನೇಣು ಬಿಗಿದು ಜಿಗಿದ ವೇಳೆ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ.

ಕಲ್ಲುಗುಂಡಿ ಕೂಲಿಶೆಡ್ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ಐವರ್ನಾಡು ಗ್ರಾಮದ ಮಾಧವ (60) ಎಂಬವರು ತನ್ನ ಬಾಡಿಗೆ ರೂಮಿನಲ್ಲಿ ಡಿ.5ರಂದು ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು ಕೆಳಕ್ಕೆ ಜಿಗಿದ ಸಂದರ್ಭ ಕೇಬಲ್ ತುಂಡಾಗಿ ನೆಲಕ್ಕೆ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ಅವರು ಸುಳ್ಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಸುಳ್ಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.





















































 
 
error: Content is protected !!
Scroll to Top