ದೇವಸ್ಥಾನದ ಎದುರು ದಫ್‌ ಪ್ರದರ್ಶನಕ್ಕೆ ವಿರೋಧ

ಹಿಂದೂ ಸಂಘಟನೆಗಳ ಆಕ್ರೋಶದ ಬಳಿಕ ಕಾರ್ಯಕ್ರಮ ಕೈಬಿಟ್ಟ ಆಯೋಜಕರು

ಸುಳ್ಯ: ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ದಫ್ ಪ್ರದರ್ಶನಕ್ಕೆ ಭಾರಿ ವಿರೋಧ ವ್ಯಕ್ತವಾದ ಬಳಿಕ ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಆಯೋಜಕರು ದಫ್ ಪ್ರದರ್ಶನವನ್ನು ಕೈಬಿಟ್ಟಿದ್ದಾರೆ.

ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಡಿಸೆಂಬರ್‌ 25 ಮತ್ತು 26ರಂದು ಕೆವಿಜಿ ಸುಳ್ಯ ಹಬ್ಬ-2025 ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಂಗಳೂರು ಇವರ ಸಾಂಸ್ಕೃತಿಕ ಕಾರ್ಯಕ್ರಮ ದಫ್ ಪ್ರದರ್ಶನಕ್ಕೆ ಸಿದ್ಧತೆ ನಡೆಸಲಾಗಿತ್ತು.





















































 
 

ಆದರೆ ದೇವಸ್ಥಾನದ ಮುಂಭಾಗ ನಡೆಯಲಿದ್ದ ದಫ್ ಪ್ರದರ್ಶನಕ್ಕೆ ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಮತ್ತಿತರ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ದೇವಸ್ಥಾನದ ಮುಂಭಾಗ ದಫ್ ಪ್ರದರ್ಶನ ಮಾಡಿದರೆ, ಮಸೀದಿ ಮುಂದೆ ಹನುಮಾನ್ ಚಾಲೀಸ್ ಪಠಣ ಮಾಡುವುದಾಗಿ ಎಚ್ಚರಿಕೆ ನೀಡಲಾಗಿತ್ತು.

ದಫ್ ಪ್ರದರ್ಶನಕ್ಕೆ ಭಾರಿ ವಿರೋಧ ವ್ಯಕ್ತವಾದ ಬೆನ್ನಲ್ಲೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಮಣಿದ ಆಯೋಜಕರು ಚೆನ್ನಕೇಶವ ದೇವಸ್ಥಾನ ಮುಂದೆ ದಫ್ ಪ್ರದರ್ಶನವನ್ನು ಕೈಬಿಟ್ಟಿದ್ದಾರೆ.

ಚೆನ್ನಕೇಶವ ದೇವಸ್ಥಾನ ಹಿಂದೂಗಳ ಧಾರ್ಮಿಕ ಕೇಂದ್ರ. ಅಲ್ಲಿ ಅನ್ಯಧರ್ಮಿಯರ ದಫ್ ಪ್ರದರ್ಶನ ಮಾಡುವುದು ಹಿಂದೂಗಳ ಧಾರ್ಮಿಕ ನಂಬಿಕೆಗೆ ಧಕ್ಕೆ ಉಂಟುಮಾಡುವ ಕಾರ್ಯಕ್ರಮ. ಹಾಗಾಗಿ ವಿಎಚ್​ಪಿ, ಬಜರಂಗದಳ ಸೇರಿದಂತೆ ಎಲ್ಲಾ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತಪಡಿಸಲಾಗಿದೆ ಎಂದು ವಿಎಚ್​ಪಿ ಸುಳ್ಯ ಪ್ರಖಂಡ ಪ್ರಧಾನ ಕಾರ್ಯದರ್ಶಿ ನವೀನ್ ಎಲಿಮಲೆ ಹೇಳಿದ್ದಾರೆ.

error: Content is protected !!
Scroll to Top